Names and Rulings

Names and Rulings

25- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

38- ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ

44- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ